ಲಕ್ಷ್ಮೇಶ್ವರ: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಜನರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.
ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ ಹಾಗೂ ಸೋಮವ್ವಾ ಅಡುಗೆಮನಿ ಮೃತ ದುರ್ದೈವಿಗಳಾಗಿದ್ದು, ಇವರು ಹೊಲದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಬರುವಾಗ ಈ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸ್ಥಳಕ್ಕೆ ಸಿಪಿಐ ವಿಕಾಸ್ ಲಮಾಣಿ ಭೇಟಿ ಪರಿಶೀಲನೆ ನಡೆಸಿದರು. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
25/02/2021 02:06 pm