ಹುಬ್ಬಳ್ಳಿ : ಮೊಬೈಲ್ ನಲ್ಲಿ ಮಾತನಾಡುತ್ತ ಹೊರಟಿದ್ದ ಬೈಕ್ ಸವಾರ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದು ಹಿಂಬದಿ ಚಕ್ರದಡಿ ಹೋಗಿ ಬಿದ್ದ ಪರಿಣಾಮ, ಸ್ಥಳದಲ್ಲಿ ಯೇ ಸಾವನ್ನಪ್ಪಿರುವ ಘಟನೆ ನಿನ್ನೆ ತಡ ರಾತ್ರಿ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ನಡೆದಿದೆ.
ನೀಲಪ್ಪ ಮಾದರ ಎಂಬುವವರಿಗೆ ಸೇರಿದ ಬೈಕಿನಲ್ಲಿ ಬರುತ್ತಿದ್ದ ವ್ಯಕ್ತಿಯು, ಮೊಬೈಲ್ ನಲ್ಲಿ ಮಾತನಾಡುತ್ತಾ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ತಕ್ಷಣವೇ ನಿಯಂತ್ರಣ ತಪ್ಪಿ, ಲಾರಿಯ ಚಕ್ರದಡಿ ಸಿಲುಕಿದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಈ ಕುರಿತು ಉಪನಗರ ಠಾಣೆ ಪ್ರಕರಣ ದಾಖಲಾಗಿದ್ದು, ಟ್ರಾಫಿಕ್ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Kshetra Samachara
28/02/2021 03:32 pm