ಹುಬ್ಬಳ್ಳಿ- ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ, ಕಾರು ಪ್ಲೈಓವರ್ ಕಾಲಂಗೆ ಡಿಕ್ಕಿ ಹೊಡೆದು ಬಿಜೆಪಿ ಮುಖಂಡನಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ನಗರದ ವಿದ್ಯಾನಗರದ ಬಿವಿಬಿ ತಾಂತ್ರಿಕ ಮಹಾವಿದ್ಯಾಲಯದ ಬಳಿ ಕಾರು ಏಕಾಏಕಿ ಕಾರಿನ ಟೈರ್ ಬ್ಲ್ಯಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ, ಎದುರಿಗೆ ಇರುವ ಪ್ಲೈಓವರಗೆ ಕಾಲಂಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇನ್ನು ಕಾರಿನಲ್ಲಿ ಬಿಜೆಪಿ ಮುಖಂಡ ರಾಜಣ್ಣ ಕೊರವಿ ಇದ್ದರು ಎಂದು ತಿಳಿದು ಬಂದಿದ್ದು, ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಸ್ವಲ್ಪದರಲ್ಲಿಯೇ ಪ್ರಾಣಾಪಯದಿಂದ ಪಾರು ಆಗಿದ್ದಾರೆ. ತಕ್ಷಣ ವಿದ್ಯಾನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರು ಯಾರು ಚಲಾವಣೆ ಮಾಡುತಿದ್ದರು ಎಂದು ತಿಳಿದುಬಂದಿಲ್ಲ. ಈ ಬಗ್ಗೆ ಕಾರಣ ತನಿಖೆ ನಂತರ ತಿಳಿದುಬರಲಿದೆ. ಈ ಘಟನೆ ಉತ್ತರ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ಮಾಡುತಿದ್ದಾರೆ.
Kshetra Samachara
01/08/2021 11:55 am