ಧಾರವಾಡ: ಧಾರವಾಡದಿಂದ ನವಲಗುಂದ ತಾಲೂಕಿನ ಮೊರಬ ಗ್ರಾಮದ ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ ಹೆಬ್ಬಳ್ಳಿ ಗ್ರಾಮದ ಬಳಿ ಪಲ್ಟಿಯಾಗಿದ್ದು, ಚಾಲಕ ಸೇರಿದಂತೆ ಹಲವು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಕೆಎ 25 ಎಫ್ 3074 ಸಂಖ್ಯೆಯ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸೇರಿದಂತೆ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
16/08/2021 04:04 pm