ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಕೆಮಿಕಲ್ ತುಂಬಿದ ಟ್ಯಾಂಕರ್ ಲಾರಿ

ಕಲಘಟಗಿ: ಪಟ್ಟಣದ ಹೊರವಲಯದ ತಡಸ ಕ್ರಾಸ್ ಹತ್ತಿರ ಹುಬ್ಬಳ್ಳಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಮಿಕಲ್ ತುಂಬಿದ ಟ್ಯಾಂಕರ್ ಲಾರಿ ಉರುಳಿ ಬಿದ್ದ ಘಟನೆ ಗುರುವಾರ ಜರುಗಿದೆ.

ಕೆಮಿಕಲ್ ತುಂಬಿದ ಟ್ಯಾಂಕರ್ ಲಾರಿ ಕಾರವಾರದಿಂದ ಹುಬ್ಬಳ್ಳಿ ಕಡೆಗೆ ಹೊರಟಾಗ ಟೈಯರ್ ಬ್ಲಾಸ್ಟ್ ಆಗಿದೆ. ಇದರಿಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಉರುಳಿ ಬಿದ್ದದ್ದು,ಚಾಲಕನಿಗೆ ಗಾಯಗಳಾಗಿದ್ದು ಕಲಘಟಗಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಲಾರಿ ಹೆದ್ದಾರಿಯಲ್ಲಿ ಬಿದ್ದ ಪರಿಣಾಮ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.ಸ್ಥಳಕ್ಕೆ ಪೋಲಿಸರು ಭೇಟಿ‌ ನೀಡಿ ಮಾಹಿತಿ ಪಡೆದಿದ್ದಾರೆ.

Edited By : Manjunath H D
Kshetra Samachara

Kshetra Samachara

26/08/2021 06:48 pm

Cinque Terre

90.74 K

Cinque Terre

0

ಸಂಬಂಧಿತ ಸುದ್ದಿ