ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಹುಬ್ಬಳ್ಳಿ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾದ ಘಟನೆ ನಗರದ ಹೊರವಲಯದ ಕುಸುಗಲ್ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಕೆಲಸದ ನಿಮಿತ್ತ ನವಲಗುಂದಕ್ಕೆ ಹೋಗುತ್ತಿದ್ದಾಗ, ಕುಸಗಲ್ ರಸ್ತೆಯ ಸಿದ್ಧಾರೂಢ ಮಠದ ಹತ್ತಿರ

ಇನೋವಾ ಕಾರಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರನಿಗೆ ಗಾಯಗಳಾಗಿವೆ. ಕೂಡಲೇ ಗಾಯಗೊಂಡ ಬೈಕ್ ಸವಾರನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

05/09/2021 01:14 pm

Cinque Terre

82.55 K

Cinque Terre

1

ಸಂಬಂಧಿತ ಸುದ್ದಿ