ಮುಂಡರಗಿ: ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿಯ ಗ್ರಾಮ ಪಂಚಾಯ್ತಿಯಲ್ಲಿಯೇ ಗ್ರಾಮ ಪಂಚಾಯ್ತಿ ಸಿಬ್ಬಂಧಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಿರೇವಡ್ಡಟ್ಟಿ ಗ್ರಾಮ ಪಂಚಾಯ್ತಿಯಲ್ಲಿನ ಪ್ಯಾನ್ ಗೆ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಪ್ಪ ಹೊಳಗುಂದಿ (೨೮) ಎಂಬ ವ್ಯಕ್ತಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಮುಂಡರಗಿ ಪೊಲೀಸ್ ಠಾಣೆಯ ಸಿ.ಪಿ.ಐ ಸುನೀಲ್ ಸವದಿಯವರು ಭೇಟಿ ನೀಡಿ ಪರಿಶೀಲಿಸಿದರು.
Kshetra Samachara
29/09/2021 02:54 pm