ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಬಳಿ ಸಿಮೆಂಟ್ ತುಂಬಿದ ಲಾರಿ ಹಾಗೂ ದ್ವಿಚಕ್ರ ವಾಹನ ಅಪಘಾತ,ಉರುಳಿ ಬಿದ್ದ ಲಾರಿ:ಸಂಚಾರಕ್ಕೆ ಅಡಚಣೆ

ಕಲಘಟಗಿ: ತಾಲೂಕಿನ ಜುಂಜನಬೈಲ್ ಗ್ರಾಮದ ಹತ್ತಿರದ ಹೆದ್ದಾರಿ 63 ರಲ್ಲಿ ಸಿಮೆಂಟ್ ತುಂಬಿದ ಲಾರಿ ಹಾಗೂ ದ್ವಿಚಕ್ರ ವಾಹನ ಅಪಘಾತವಾಗಿ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಶುಕ್ರವಾರ ಸಂಜೆ ಜರುಗಿದೆ.

ಹುಬ್ಬಳ್ಳಿ ಕಡೆಯಿಂದ ಕಾರವಾರ ಕಡೆಗೆ ಹೊರಟಿದ್ದ ಸಿಮೆಂಟ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಸಂಭವಿಸಿ,ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿ ಲಾರಿ ಹೆದ್ದಾರಿ ಪಕ್ಕದಲ್ಲಿ ಉರುಳಿ ಬಿದ್ದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ‌.

ಲಾರಿ ಹಾಗೂ ದ್ವಿಚಕ್ರ ವಾಹನ ಚಾಲಕರು ಎಲ್ಲಿಯವರು ಎಂಬ ಮಾಹಿತಿ ಲಭ್ಯವಾಗಿಲ್ಲ.

ಘಟನೆಯಿಂದ ಕೆಲ ಹೊತ್ತ ಹುಬ್ಬಳ್ಳಿ ಕಾರವಾರ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

Edited By : Nagesh Gaonkar
Kshetra Samachara

Kshetra Samachara

01/10/2021 09:30 pm

Cinque Terre

47.96 K

Cinque Terre

0

ಸಂಬಂಧಿತ ಸುದ್ದಿ