ಹುಬ್ಬಳ್ಳಿ : ನಿನ್ನೆ ಬೆಳ್ಳಂಬೆಳಿಗ್ಗೆ ಕರ್ತವ್ಯಕ್ಕೆ ಬರುವ ಸಂದರ್ಭದಲ್ಲಿ ಬೈಕ್ ಮೇಲಿಂದ ನಿಯಂತ್ರಣ ತಪ್ಪಿ ಬಿದ್ದಿದ್ದ ಯುವಕ ಕಿರಣ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನಪ್ಪಿದ್ದಾನೆ. ಹೌದು. ಕಿಮ್ಸ್ ಆಸ್ಪತ್ರೆಯ ಪಿ.ಎಂ.ಎಸ್.ಎಸ್.ವೈ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಣ ಎಂಬಾತ ನಿನ್ನೆ ಗೋಕುಲ ರಸ್ತೆಯಲ್ಲಿ ಬೈಕ್ ಮೇಲಿಂದ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು.
ಕೂಡಲೇ ಈತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಿದರು ಕೂಡಾ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದು, ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
07/10/2021 10:06 am