ಹುಬ್ಬಳ್ಳಿ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಅಪಘಾತದಲ್ಲಿ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಗ್ರಾಮದಲ್ಲಿ ನಡೆದಿದ್ದು, ಚಿಕಿತ್ಸೆಗಾಗಿ ಬಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಣೇಶ ಹನುಮಂತಪ್ಪ ವಡ್ಡರ(11) ಬಾಲಕನೇ ಟ್ರ್ಯಾಕ್ಟರ್ ನಲ್ಲಿ ಕಬ್ಬು ತರುವ ಸಂದರ್ಭದಲ್ಲಿ ಕಾಲು ಸಿಲುಕಿಕೊಂಡಿದ್ದು, ಬಲಗಾಲಿಗೆ ಗಂಭೀರವಾದ ಗಾಯವಾಗಿದೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಮಧ್ಯ ಬಾಲಕ ಹೋರಾಟ ನಡೆಸಿದ್ದಾನೆ.
Kshetra Samachara
13/10/2021 07:35 pm