ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ಸಿನ ಬ್ರೇಕ್ ಫೇಲ್: ಧಾರವಾಡದಲ್ಲಿ ತಪ್ಪಿದ ದುರಂತ

ಧಾರವಾಡ: ಮದುವೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ಸಿನ ಬ್ರೇಕ್ ಫೇಲ್ ಆಗಿ ಬಸ್ಸು ನವಲೂರು ಬ್ರಿಜ್ನ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕೊಪ್ಪಳ ಡಿಪೊದ ಸಾರಿಗೆ ಸಂಸ್ಥೆ ಬಸ್ಸು ಇದಾಗಿದ್ದು, ಹುಬ್ಬಳ್ಳಿ ಕಡೆಗೆ ಮದುವೆಗೆಂದು ಹೊರಟಿತ್ತು. ಬಸ್ಸಿನಲ್ಲಿ 50 ಜನ ಪ್ರಯಾಣಿಸುತ್ತಿದ್ದರು. ನವಲೂರು ಬಳಿ ಬರುತ್ತಿದ್ದಂತೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು ಬ್ರಿಜ್ನ ತಡೆಗೋಡೆಗೆ ಡಿಕ್ಕಿಪಡಿಸಿದ್ದಾನೆ. ಇದರಿಂದ ಮುಂದಾಗುವ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದರು. ಸಾರಿಗೆ ಸಂಸ್ಥೆಯ ಈ ಬಸ್ಸನ್ನು ಮದುವೆಗಾಗಿ ಬಾಡಿಗೆ ಮಾಡಿಕೊಂಡು ಹೋಗಲಾಗುತ್ತಿತ್ತು.

Edited By : Nirmala Aralikatti
Kshetra Samachara

Kshetra Samachara

17/11/2021 03:22 pm

Cinque Terre

37.32 K

Cinque Terre

11

ಸಂಬಂಧಿತ ಸುದ್ದಿ