ಧಾರವಾಡ: ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿಯ ಬೈಪಾಸ್ ರಸ್ತೆಯಲ್ಲಿ ಕ್ಯಾಂಟರ್ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ.
ಕಬ್ಬಿಣದ ರಾಡ್‌ಗಳನ್ನು ಲೋಡ್ ಮಾಡಿಕೊಂಡು ಹುಬ್ಬಳ್ಳಿ ಕಡೆಯಿಂದ ಧಾರವಾಡ ಕಡೆಗೆ ಈ ಕ್ಯಾಂಟರ್ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದರು.
Kshetra Samachara
17/11/2021 04:35 pm