ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ ಹಾಗೂ ಬಸ್ ನಡುವೆ ಅಪಘಾತ: ವೃದ್ಧನ ಸ್ಥಿತಿ ಗಂಭೀರ

ಹುಬ್ಬಳ್ಳಿ : ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ‌ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿಯನ್ನು ನೀಡಿದ್ದು ಪರಿಶೀಲನೆ ನಡೆಸಿ ಕಾರಿನಲ್ಲಿದ್ದವರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

Edited By :
Kshetra Samachara

Kshetra Samachara

04/12/2021 01:28 pm

Cinque Terre

49.03 K

Cinque Terre

1

ಸಂಬಂಧಿತ ಸುದ್ದಿ