ಹುಬ್ಬಳ್ಳಿ: ಟವೆರಾ ಚಾರ್ವಲೆಟ್ ಕಾರವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿದ ಪರಿಣಾಮ ಕಾರ್ ಹೊತ್ತಿ ಉರಿದ ಘಟನೆಯೊಂದು ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರ್ ಎಂಜಿನ್ ಗೆ ಬೆಂಕಿ ತಗುಲಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಸದ್ಯ ಕಾರ್ ಯಾರಿಗೆ ಸೇರಿದ್ದು, ಎಲ್ಲಿಗೆ ಹೊರಟಿದೆ ಎನ್ನುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಬೆಂಕಿ ಆವರಿಸುತ್ತಿರುತ್ತಿದ್ದಂತೆ ಅದರಲ್ಲಿದ್ದ ಜನ ಹೊರಬಂದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kshetra Samachara
05/12/2021 02:21 pm