ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸ್ಕಿಡ್ ಆದ ಬೈಕ್- ಸವಾರ ಸ್ಥಳದಲ್ಲೇ ಸಾವು

ಧಾರವಾಡ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.

ಮೃತ ಬೈಕ್ ಸವಾರನನ್ನು ಅಳ್ನಾವರದ ಪರಶುರಾಮ ದೇಸಾಯಿ ಎಂದು ಗುರುತಿಸಲಾಗಿದೆ. ಧಾರವಾಡದಿಂದ ಮರಳಿ ಹೋಗುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಬೈಕಿನಿಂದ ಬಿದ್ದ ಪರಿಣಾಮ ಪರಶುರಾಮನ ತಲೆಗೆ ಗಂಭೀರವಾದ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

14/12/2021 05:28 pm

Cinque Terre

32.11 K

Cinque Terre

9

ಸಂಬಂಧಿತ ಸುದ್ದಿ