ಹುಬ್ಬಳ್ಳಿ: ಕಾರು ಮತ್ತು ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡು ವಾಹನಗಳು ನುಜ್ಜುಗುಜ್ಜಾಗಿ ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಹುಬ್ಬಳ್ಳಿ-ಗದಗ ರಸ್ತೆಯ ಬಂಡಿವಾಡ ಬಳಿ ನಡೆದಿದೆ.
ಕಾರು ಹಾಗೂ ಟಾಟಾ ಏಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ.
Kshetra Samachara
14/12/2021 10:29 pm