ಕುಂದಗೋಳ : ಆಕಸ್ಮಿಕವಾಗಿ ಚಾಚಿಕೊಂಡ ಬೆಂಕಿ ಕೆನ್ನಾಲಿಗಿಗೆ ಸಿಲುಕಿ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗ ಧಗಿಸಿದ ಘಟನೆ ಕುಂದಗೋಳ ತಾಲೂಕಿನ ಕಳಸ ಗ್ರಾಮದಲ್ಲಿ ನಿನ್ನೆ ಶನಿವಾರ ಮಧ್ಯಾಹ್ನದ ಅವಧಿಯಲ್ಲಿ ಸಂಭವಿಸಿದೆ.
ಹೌದು ! ಕುಂದಗೋಳ ತಾಲೂಕಿನ ಕಳಸ ಗ್ರಾಮದ ಮುಸ್ತಾಕ್ ಅಹಮ್ಮದ್ ಸಾಲಿ ಎಂಬುವವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿ ಕಟ್ಟಿ ಹಾಕಿದ್ದ ಎಮ್ಮೆ ಅಸುನೀಗಿದ್ರೇ ಪಿಠೋಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ಆಕಳೊಂದು ಬೆಂಕಿಗೆ ಸಿಲುಕಿದ ಪರಿಣಾಮ ಜೀವನ್ಮರಣ ಹೋರಾಟದಲ್ಲಿದೆ.
ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಮುಸ್ತಾಕ್ ಅಹಮ್ಮದ್ ಸಾಲಿ ಕುಟುಂಬದವರು ಹೊಲಕ್ಕೆ ಹೋದ ಸಮಯದಲ್ಲಿ ಈ ಘಟನೆ ನಡೆದಿದ್ದು ಸಂಭವಿಸಬಹುದಾದ ಅಪಾಯ ತಪ್ಪಿದಂತಾಗಿದೆ. ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
19/12/2021 07:12 pm