ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹರ್ಷ ಕಾಂಪ್ಲೆಕ್ಸ್‌ನ ಹರ್ಷ ಮಳಿಗೆಯಲ್ಲಿ ಬೆಂಕಿ! ತಪ್ಪಿದ ಭಾರಿ ಅನಾಹುತ

ಹುಬ್ಬಳ್ಳಿ: ನಗರದ ರೈಲ್ವೆ ಸ್ಟೇಶನ್ ರಸ್ತೆಯಲ್ಲಿನ, ಹರ್ಷಾ ಕಾಂಪ್ಲೆಕ್ಸ್‌ನಲ್ಲಿರುವ ಹರ್ಷ ಸರ್ವಿಸ್ ಸೆಂಟರ್‌ ಮಳಿಗೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

ನಿನ್ನೆ ರಾತ್ರಿ 9.30 ರ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿರಬಹುದು ಎಂದು ತಿಳಿದು ಬಂದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಒಳಗಡೆ ಇದ್ದ ಎಲೆಕ್ಟ್ರಾನಿಕ್ಸ್ ವಸ್ತುಗಳು ಸೇರಿದಂತೆ ಇತರ ವಸ್ತುಗಳು ಸುಟ್ಟಿದ್ದವು. ಪ್ರಯಾಸಪಟ್ಟು ಅಗ್ನಿ ಶಾಮಕ ಸಿಬ್ಬಂದಿ ಸಾರ್ವಜನಿಕರ ಸಹಕಾರದಿಂದ ಶಟರ್ಸ್ ತೆರವುಗೊಳಿಸಿ ಬೆಂಕಿ ನಂದಿಸಿದರು.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇರಬಹುದು, ಪೂರ್ಣ ಪರಿಶೀಲನೆ ಬಳಿಕ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ಸ್ಥಳದಲ್ಲಿದ್ದ ಅಗ್ನಿ ಶಾಮಕ ದಳದ ಸಿಬ್ಬಂದಿ ಹೇಳಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

23/12/2021 11:52 am

Cinque Terre

38.37 K

Cinque Terre

0

ಸಂಬಂಧಿತ ಸುದ್ದಿ