ಧಾರವಾಡ: ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಸಮೀಪ ನಡೆದಿದೆ.
ಮುಳಮುತ್ತಲ ಗ್ರಾಮದ ಚನ್ನಪ್ಪ ಬಸಪ್ಪ ಬನವಣ್ಣವರ (21) ಎಂಬ ಯುವಕನೇ ಸಾವನ್ನಪ್ಪಿದವನು.
ಈತ ಬೈಕ್ ತೆಗೆದುಕೊಂಡು ಧಾರವಾಡ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಧಾರವಾಡ ಕಡೆಯಿಂದ ಯಾದವಾಡ ಕಡೆಗೆ ಬರುತ್ತಿದ್ದ ಬಸ್ಸು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಯುವಕ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
23/12/2021 01:59 pm