ಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಓರ್ವ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಳಿದ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ ಕಾಟವಾಟೆ ಎನ್ನುವವರ ಹೆಸರಿನಲ್ಲಿದೆ.
ಮೃತ ಯುವಕನನ್ನ ಹುಬ್ಬಳ್ಳಿ ಮಹಾವೀರಗಲ್ಲಿಯ ಗಣೇಶ ಬಂಡಿ ಎಂದು ಗುರುತಿಸಲಾಗಿದ್ದು, ಗಾಯಾಳುಗಳ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಕಾನೂನು ಕ್ರಮವನ್ನ ಜರುಗಿಸಿದ್ದಾರೆ.
Kshetra Samachara
01/01/2022 12:29 pm