ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಬೈಲಹೊಂಗಲ ರಸ್ತೆಯಲ್ಲಿರುವ ಬ್ರಿಡ್ಜ್ ಮೇಲೆಯೇ ಈ ದುರ್ಘಟನೆ ಸಂಭವಿಸಿದೆ. ಕಲ್ಲೂರು ಗ್ರಾಮದ ನನ್ನೇಸಾಬನವರ (41) ಎಂಬುವವರೇ ಸಾವನ್ನಪ್ಪಿದವರು.
ಎದುರಿಗೆ ಬರುತ್ತಿದ್ದ ಚಕ್ಕಡಿಯನ್ನು ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಬಿದ್ದು, ಈ ವ್ಯಕ್ತಿಯ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
01/01/2022 09:35 pm