ಧಾರವಾಡ: ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಧಾರವಾಡದ ಛಾಯಾಗ್ರಾಹಕರೊಬ್ಬರು ಅಸುನೀಗಿರುವ ಘಟನೆ ನುಗ್ಗಿಕೇರಿ ಬಳಿ ಸಂಭವಿಸಿದೆ.
ಧಾರವಾಡದ ಅಮಿತ್ ಸಿಂಗ್ ಎಂಬುವವರೇ ಈ ಅಪಘಾತದಲ್ಲಿ ಸಾವನ್ನಪ್ಪಿದವರು. ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದಾರೆ.
ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Kshetra Samachara
02/01/2022 10:02 pm