ನವಲಗುಂದ : ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಕ್ಕೆಜೋಳ ಹೊತ್ತು ಒಯುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಲಾರಿ ಹೊತ್ತಿ ಉರಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ತಾಲ್ಲೂಕಿನ ಬೆಳವಟಗಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
Kshetra Samachara
03/01/2022 05:14 pm