ಕಲಘಟಗಿ: ಕಬ್ಬಿನ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಹಿನ್ನಲೆಯಲ್ಲಿ ಕಬ್ಬಿನ ಹೊಲ ಹೊತ್ತಿ ಉರಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಬಳಿ ಕಬ್ಬಿನ ಹೊಲದಲ್ಲಿ ನಡೆದಿದೆ.
ಆಕಸ್ಮಿಕ ಬೆಂಕಿ ತಗುಲಿದ ಹಿನ್ನಲೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಬೆಳೆ ಬೆಂಕಿಗಾಹುತಿ ಆಗಿದ್ದು, ಪಕ್ಕದ ಹೊಲಗಳಿಗೂ ಬೆಂಕಿ ವ್ಯಾಪಿಸುತ್ತಾ ಹೊರಟಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಪೊಲೀಸರು ಸಮಯಪ್ರಜ್ಞೆ ಮೆರೆದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳಿಗೆ ವಿಷಯ ತಿಳಿಸಿದ ಹವಾಲ್ದಾರ ಮಲ್ಲಿಕಾರ್ಜುನ ಚೌಡಣ್ಣವರ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದು, ಎರಡು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿದ್ದರೂ ಬೆಂಕಿ ಹತೋಟಿಗೆ ಬರುತ್ತಿಲ್ಲ.
Kshetra Samachara
06/01/2022 07:05 pm