ಧಾರವಾಡ: ಸಾರಿಗೆ ಸಂಸ್ಥೆಯ ಎರಡು ಬಸ್ಸುಗಳ ಮಧ್ಯೆ ಅಪಘಾತ ನಡೆದಿದ್ದು, ಚಾಲಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಶಿಂಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಶಿಂಗನಹಳ್ಳಿ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ಸಿಗೆ ಬೆಳಗಾವಿ ಕಡೆಯಿಂದ ಬರುತ್ತಿದ್ದ ಮತ್ತೊಂದು ಸಾರಿಗೆ ಸಂಸ್ಥೆ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಶಿಂಗನಹಳ್ಳಿ ಕಡೆಯಿಂದ ಬರುತ್ತಿದ್ದ ಬಸ್ಸಿನ ಚಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. ಶಿಂಗನಹಳ್ಳಿ ಕ್ರಾಸ್ ಬಳಿ ಈ ರೀತಿ ಅವಘಡಗಳು ನಡೆಯುತ್ತಲೇ ಇದ್ದು, ಆ ಕ್ರಾಸ್ ಬಳಿ ರೋಡ್ ಬ್ರೇಕರ್‌ಗಳನ್ನು ಹಾಕಿ, ಫಲಕಗಳನ್ನು ಅಳವಡಿಸವಂತೆ ಶಿಂಗನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Kshetra Samachara
11/01/2022 02:11 pm