ಕುಂದಗೋಳ : ಕೆರೆಯಲ್ಲಿ ಈಜಲು ಹೋದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕುಂದಗೋಳ ತಾಲೂಕಿನ ಗುರವಿನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನದ ಅವಧಿಯಲ್ಲಿ ನಡೆದಿದೆ.
ಹೌದು ! ಗುರುವಿನಹಳ್ಳಿ ಗ್ರಾಮ ಮೃತ್ಯುಂಜಯ ದೊಡ್ಡವಾಡಮಠ (45) ಎಂಬತಾನೇ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಗ್ರಾಮಸ್ಥರಿಂದ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಠಾಣಾಧಿಕಾರಿ ಗೋವಿಂದಪ್ಪ್ ತೋರಣಗಟ್ಪಿ ನೇತೃತ್ವದಲ್ಲಿ ಅಗ್ನಿಶಾಮಕದಳದ ಸಿಬ್ಬಂದಿಗಳು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಹೊರ ತೆಗೆದಿದ್ದಾರೆ.
ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
14/01/2022 09:25 pm