ಹುಬ್ಬಳ್ಳಿ: ಅಕ್ಕಿ ತುಂಬಿಕೊಂಡು ಹೊರಟಿದ್ದ ಆಟೋ ರಿಕ್ಷಾವೊಂದು ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿ ಧಾರವಾಡ ಮಧ್ಯದ ಉಣಕಲ್ ಕೆರೆಯ ಹತ್ತಿರದಲ್ಲಿ ನಡಿದಿದೆ.
ಓವರ್ ಲೋಡ್ ಮಾಡಿಕೊಂಡು ಹೊರಟಿದ್ದ ಆಟೋ ರಿಕ್ಷಾ, ಇನ್ನೋವಾ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಆಟೋ ಚಾಲಕನಿಗೆ ಗಾಯಗಳಾಗಿದ್ದು, ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
Kshetra Samachara
17/01/2022 02:21 pm