ಹುಬ್ಬಳ್ಳಿ: ರಸ್ತೆ ಪಕ್ಕದಲ್ಲಿ ನಿಂತಿದ್ದ ನೀರಿನ ಟ್ಯಾಂಕರ್‌ಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ನಗರದ ಕೇಶ್ವಾಪುರದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಎದುರಿಗೆ ನಡೆದಿದೆ.
ಟ್ರ್ಯಾಕ್ಟರ್ ನೀರಿನ ಟ್ಯಾಂಕರ್ ಚಾಲಕ ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿ ಉಪಹಾರಕ್ಕೆಂದು ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಪರಿಣಾಮ ವೃದ್ಧ ಸವಾರನಿಗೆ ತಲೆಗೆ ಪೆಟ್ಟು ಬಿದ್ದಿದೆ. ಗಾಯಗೊಂಡ ವೃದ್ಧನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Kshetra Samachara
20/01/2022 01:16 pm