ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿಶ್ವೇಶ್ವರಯ್ಯ ಪ್ರತಿಮೆ ಕಂಪೌಂಡ್‌ಗೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

ಧಾರವಾಡ: ಧಾರವಾಡದ ಲೋಕೋಪಯೋಗಿ ಇಲಾಖೆ ಬಳಿ ಇರುವ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಯ ಕಂಪೌಂಡ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯನವರ ಪ್ರತಿಮೆಯ ಕಂಪೌಂಡ್‌ಗೆ ಈ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೋರ್ಟ್ ಸರ್ಕಲ್ ಕಡೆಯಿಂದ ಬಂದ ಈ ಕಾರಿನ ಸ್ಟೇರಿಂಗ್ ಲಾಕ್ ಆಗಿ ನೇರವಾಗಿ ವಿಶ್ವೇಶ್ವರಯ್ಯನವರ ಪ್ರತಿಮೆ ಇದ್ದ ಕಂಪೌಂಡ್‌ಗೆ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಭೇಟಿ ನೀಡಿದ ಸಂಚಾರ ಠಾಣೆ ಪೊಲೀಸರು ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಅಪಘಾತವಾದ ನಂತರ ಅದೇ ಮಾರ್ಗವಾಗಿ ಹಾಯ್ದು ಹೋಗುತ್ತಿದ್ದ ಡಿಎಚ್‌ಓ ಕರಿಗೌಡರ ಕೂಡ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು.

Edited By : Shivu K
Kshetra Samachara

Kshetra Samachara

21/01/2022 02:57 pm

Cinque Terre

85.3 K

Cinque Terre

7

ಸಂಬಂಧಿತ ಸುದ್ದಿ