ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಬ್ರೇಕಿಂಗ್: ನಡು ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ

ಧಾರವಾಡ: ಧಾರವಾಡ ಬೈಪಾಸ್ ಬಳಿ ಇರುವ ರಮ್ಯ ರೆಸಿಡೆನ್ಸಿ ಹತ್ತಿರ ಸರಕು ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.

ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಈ ಲಾರಿ ಹೊರಟಿತ್ತು. ಈ ವೇಳೆ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಾರಿ ಚಾಲಕ ವಾಹನ ಬಿಟ್ಟು ಕೆಳಗೆ ಇಳಿದಿದ್ದಾನೆ.

ನೋಡ ನೋಡುತ್ತಿದ್ದಂತೆ ಲಾರಿಗೆ ದೊಡ್ಡಮಟ್ಟದಲ್ಲಿ ಬೆಂಕಿ ಹೊತ್ತಿಕೊಂಡು ನಡು ರಸ್ತೆಯಲ್ಲೇ ಧಗ ಧಗನೇ ಉರಿಯಲಾರಂಭಿಸಿತು. ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಿದ್ದರಿಂದ ಸ್ಥಳಕ್ಕೆ ಬಂದಿರುವ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ.

Edited By : Shivu K
Kshetra Samachara

Kshetra Samachara

21/01/2022 10:46 pm

Cinque Terre

59.46 K

Cinque Terre

1

ಸಂಬಂಧಿತ ಸುದ್ದಿ