ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಗುಂಡಿಗೆ ಇಳಿದ ಬಸ್- 9 ಜನರಿಗೆ ಗಾಯ

ಹುಬ್ಬಳ್ಳಿ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಸಂಸ್ಥೆಯ ಬಸ್‌ವೊಂದು ರಸ್ತೆ ಪಕ್ಕದ ಗುಂಡಿಗೆ ಇಳಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕುಮಾರಗೊಪ್ಪ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೆ ಜೀವಹಾನಿ ಸಂಭವಿಸಿಲ್ಲ.

ರೋಣ ಡಿಪೋದ KA-26 F-1044 ನಂಬರಿನ ಬಸ್ ಧಾರವಾಡದಿಂದ ರೋಣ ಕಡೆಗೆ ತೆರಳುತ್ತಿತ್ತು. ಈ ವೇಳೆ ನವಲಗುಂದ ಪಟ್ಟಣದ ಹೊರವಲಯದ ಕುಮಾರಗೋಪ್ಪ ಕ್ರಾಸ್ ಬಳಿಯ ಧಾರವಾಡ ಕೆರೆ ಎದುರು ಬೈಕ್ ಏಕಾಏಕಿ ಬಂದಿದೆ. ತಕ್ಷಣವೇ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸಿದ್ದಾನೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಗುಂಡಿಗೆ ನುಗ್ಗಿದೆ. ಇದರಿಂದಾಗಿ ಬಸ್ ನಲ್ಲಿದ್ದ 19 ಪ್ರಯಾಣಿಕರು ಕೊಂಚ ಗಾಬರಿಗೊಂಡಿದ್ದು, ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 9 ಜನರಿಗೆ ಗಾಯ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Shivu K
Kshetra Samachara

Kshetra Samachara

25/01/2022 10:25 am

Cinque Terre

39.09 K

Cinque Terre

0

ಸಂಬಂಧಿತ ಸುದ್ದಿ