ನವಲಗುಂದ: ವೇಗವಾಗಿ ಬಂದ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಕರ್ಲವಾಡ ಗ್ರಾಮದಲ್ಲಿ ಸಂಭವಿಸಿದೆ.
ಕರ್ಲವಾಡ ಗ್ರಾಮದ ಮಲ್ಲಿಕಾರ್ಜುನ ಶಿವಪ್ಪ ತಿರ್ಲಾಪುರ ಮೃತ ವ್ಯಕ್ತಿ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಬುಧವಾರ ರಾತ್ರಿ ಮಲ್ಲಿಕಾರ್ಜುನ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ಬೈಕ್ ಸವಾರನೊಬ್ಬ ವೇಗವಾಗಿ ಬಂದು ಪಾದಚಾರಿಗೆ ಗುದ್ದಿದ್ದಾನೆ. ಇದರಿಂದ ಇಬ್ಬರೂ ಗಾಯಗೊಂಡಿದ್ದು, ನವಲಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಲ್ಲಿಕಾರ್ಜುನ ಅವರು ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
Kshetra Samachara
27/01/2022 12:00 pm