ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಲಾರಿ-ಬೈಕ್ ಮಧ್ಯೆ ಅಪಘಾತ: ಓರ್ವ ಸಾವು, ಮತ್ತೋರ್ವನಿಗೆ ಗಾಯ

ಧಾರವಾಡ: ಲಾರಿ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಾಯಗೊಂಡಿರುವ ಘಟನೆ ಧಾರವಾಡದ ಹೊಯ್ಸಳನಗರದ ಬಳಿ ಸಂಭವಿಸಿದೆ.

ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ಈರಯ್ಯ ಸಂಕಿನ (55) ಎಂಬಾತನೇ ಮೃತ ದುರ್ದೈವಿ. ನಿಂಗಯ್ಯ ಶಿವಬಸಯ್ಯನವರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಳಿಯಾಳ ಕಡೆಯಿಂದ ಬರುತ್ತಿದ್ದ ಲಾರಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಸಂಚಾರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Edited By : Shivu K
Kshetra Samachara

Kshetra Samachara

29/01/2022 01:25 pm

Cinque Terre

72.85 K

Cinque Terre

2

ಸಂಬಂಧಿತ ಸುದ್ದಿ