ಧಾರವಾಡ: ವೇಗವಾಗಿ ಬರುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ಬೈಪಾಸ್ ಹತ್ತಿರ ಸಂಭವಿಸಿದೆ.
ಈ ಅಪಘಾತದಲ್ಲಿ ಸಾವನ್ನಪ್ಪಿದವರು ನಿವೃತ್ತ ಸೈನಿಕ ಎಂದು ಗೊತ್ತಾಗಿದೆ.
ಅಪಘಾತದಲ್ಲಿ, ಕಾರು ಸಂಪೂರ್ಣವಾಗಿ ಜಖ್ಖಂಗೊಂಡಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
29/01/2022 06:44 pm