ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕ್ ಮತ್ತು ಲಾರಿ ನಡುವೆ ಅಪಘಾತ: ಗೋವಾಗೆ ತೆರಳಿದ್ದ ಇಬ್ಬರ ದುರ್ಮರಣ

ಹುಬ್ಬಳ್ಳಿ: ಬೈಕ್ ಹಾಗೂ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರ ಕ್ರಾಸ್ ಬಳಿ ನಡೆದಿದೆ.

ನೂರ್ ಅಹ್ಮದ್, ಜಾವೀದ್ ಪಠಾಣ್ ಸಾವನ್ನಪ್ಪಿದ ದುರ್ದೈವಿಗಳು. ಧಾರವಾಡದ ಜಿಲ್ಲಾ ಆಸ್ಪತ್ರೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ‌ಮೃತರು. ಇಂದು ರಜೆ ಇದ್ದ ಕಾರಣ ಗೋವಾಗೆ ಪ್ರಯಾಣ ಬೆಳೆಸಿದ್ದರು. ಗೋವಾದಿಂದ ಮರಳಿ ಬರುವಾಗ ಘಟನೆ ನಡೆದಿದ್ದು, ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

Edited By :
Kshetra Samachara

Kshetra Samachara

30/01/2022 07:26 pm

Cinque Terre

45.65 K

Cinque Terre

37

ಸಂಬಂಧಿತ ಸುದ್ದಿ