ನವಲಗುಂದ: ಪಟ್ಟಣದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳು ತುಂಬಿದ್ದ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸತತವಾಗಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ಸ್ಥಳಕ್ಕೆ ನವಲಗುಂದ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಘಟನೆಯಿಂದಾಗಿ ಜನಜಂಗುಳಿ ಸೇರಿತ್ತು. ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Kshetra Samachara
31/01/2022 10:45 pm