ಧಾರವಾಡ: ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಸಂಭವಿಸಿದೆ.
ಯಾದವಾಡ ರಸ್ತೆಯಲ್ಲಿ ಈ ಅಪಘಾತ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಧಾರವಾಡ ಕಡೆಯಿಂದ ಬರುತ್ತಿದ್ದ ಕಾರಿಗೆ ಉಪ್ಪಿನ ಬೆಟಗೇರಿ ಕಡೆಯಿಂದ ಹೊರಟಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕಾರು ಕಲ್ಲೂರು ಗ್ರಾಮದ ನಿವಾಸಿಯೊಬ್ಬರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಟಿಪ್ಪರ್ ವಾಹನವನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
14/02/2022 10:19 pm