ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮನೆಯ ಗೋಡೆಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾವು

ಧಾರವಾಡ: ರಸ್ತೆಯ ತಿರುವಿನಲ್ಲಿದ್ದ ಮನೆಯ ಗೋಡೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಮೃತಪಟ್ಟ ಬೈಕ್ ಸವಾರನ ಹೆಸರು, ವಿಳಾಸ ತಿಳಿದು ಬಂದಿಲ್ಲ. ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿದ್ದ ಮದುವೆಗೆಂದು ಈ ಯುವಕ ಬೈಕ್ ತೆಗೆದುಕೊಂಡು ಬಂದಿದ್ದ ಎಂದು ಗೊತ್ತಾಗಿದೆ.

ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಸಹಿತ ಕುಸಿದು ಬಿದ್ದಿದೆ. ಘಟನೆ ಸಂಬಂಧ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

19/02/2022 12:02 pm

Cinque Terre

28.41 K

Cinque Terre

3

ಸಂಬಂಧಿತ ಸುದ್ದಿ