ಧಾರವಾಡ: ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನವಲಗುಂದ ತಾಲೂಕಿನ ಅಮರಗೋಳ-ನರಗುಂದ ರಸ್ತೆಯಲ್ಲಿ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯ ಹೆಸರು, ವಿಳಾಸ ಪತ್ತೆಯಾಗಿಲ್ಲ. ನಿನ್ನೆ ರಾತ್ರಿ ಅಪರಿಚಿತ ವಾಹನವೊಂದು ಆ ವ್ಯಕ್ತಿಗೆ ಡಿಕ್ಕಿ ಹೊಡೆದುಕೊಂಡು ಹೋಗಿದ್ದು, ಆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟ ವ್ಯಕ್ತಿಯ ಕೈ ಮೇಲೆ ಓಂ ಎಂಬ ಟ್ಯಾಟು ಇದ್ದು, ಬಿಎಲ್‌ಆರ್ ಎಂದು ಬರೆಸಿಕೊಂಡಿದ್ದಾನೆ. ಅಲ್ಲದೇ ಆಂಜನೇಯನ ಚಿತ್ರವೂ ಇದೆ. ಈ ಸಂಬಂಧ ನವಲಗುಂದ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Kshetra Samachara
22/02/2022 07:31 pm