ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಕಾರು-ಗೂಡ್ಸ್ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯ

ಕುಂದಗೋಳ : ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಹುಬ್ಬಳ್ಳಿ-ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಪಶುಪತಿಹಾಳ ಗ್ರಾಮದ ಬಳಿ ನಡೆದಿದೆ.

ಲಕ್ಷ್ಮೇಶ್ವರದಿಂದ ಹುಬ್ಬಳ್ಳಿ ಕಡೆಗೆ ಚಲಿಸುತ್ತಿದ್ದ ಕಾರು ಹಾಗೂ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರದ ಕಡೆಗೆ ಚಲಿಸುತ್ತಿದ್ದ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಇನ್ನು ಡಿಕ್ಕಿಯಾದ ರಭಸಕ್ಕೆ ಎಣ್ಣೆ ಡಬ್ಬಿ ತುಂಬಿಕೊಂಡು ಚಲಿಸುತ್ತಿದ್ದ ಗೂಡ್ಸ್ ವಾಹನ ರಸ್ತೆ ಮೇಲೆ ಉರಳಿದರೆ, ಕಾರು ರಸ್ತೆಯಿಂದ ಹೊಲದಲ್ಲಿ ಹೋಗಿ ಬಿದ್ದಿದೆ.

ಈ ಅಪಘಾತದಲ್ಲಿ ಎರಡು ವಾಹನದಲ್ಲಿ ಚಲಿಸುತ್ತಿದ್ದವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನಿರತರಾಗಿದ್ದಾರೆ. ಈ ಅಪಘಾತವು ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

24/02/2022 04:37 pm

Cinque Terre

46.42 K

Cinque Terre

0

ಸಂಬಂಧಿತ ಸುದ್ದಿ