ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಹುಬ್ಬಳ್ಳಿ: ಇಲ್ಲಿನ ಬ್ಯಾಹಟ್ಟಿ- ಕುಸುಗಲ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಭಂಡಿವಾಡ ಗ್ರಾಮದ ಬಸವರಾಜ ಶಂಕ್ರಪ್ಪ ಕಮತರ (32) ಮೃತಪಟ್ಟ ಸವಾರ. ಶಂಕ್ರಪ್ಪ ಬುಧವಾರ ಬ್ಯಾಹಟ್ಟಿ ಕಡೆಯಿಂದ ಕುಸುಗಲ್ ಕಡೆಗೆ ಹೊರಟಿದ್ದರು. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡು ಕಿಮ್ಸ್‌ಗೆ ದಾಖಲಾಗಿದ್ದ ಶಂಕ್ರಪ್ಪ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

25/02/2022 08:04 am

Cinque Terre

43.67 K

Cinque Terre

0

ಸಂಬಂಧಿತ ಸುದ್ದಿ