ಧಾರವಾಡ: ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಧಾರವಾಡ ತಾಲೂಕಿನ ತಡಸಿನಕೊಪ್ಪದ ಕ್ರಾಸ್ ಸಂಭವಿಸಿದೆ.
ಘಟನೆಯಲ್ಲಿ ಸಾವಿಗೀಡಾಗಿರುವ ಇಬ್ಬರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಸ್ಥಳಕ್ಕೆ ತೆರಳಿರುವ ಪೊಲೀಸರು, ಶವಗಳನ್ನು ಧಾರವಾಡದ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ವಾಹನಗಳು ಸಂಪೂರ್ಣ ಜಖ್ಖಂಗೊಂಡಿದ್ದು, ದುರ್ಮರಣಕ್ಕೀಡಾದವರು ಅಕ್ಕಪಕ್ಕದಲ್ಲಿಯೇ ಬಿದ್ದು ಸಾವಿಗೀಡಾಗಿದ್ದಾರೆ.
Kshetra Samachara
26/02/2022 07:43 am