ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವು

ಅಣ್ಣಿಗೇರಿ: ಅಣ್ಣಿಗೇರಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಸಾಯಂಕಾಲ 6ಗಂಟೆ ಸುಮಾರಿಗೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನವಲಗುಂದ ಕಡೆಯಿಂದ ಅಣ್ಣಿಗೇರಿ ಮಾರ್ಗವಾಗಿ ತರಳುತ್ತಿದ್ದ ಬೈಕ್ ಸವಾರ ಥಾವರಪ್ಪ ಲಮಾಣಿ (57) ಮೃತಪಟ್ಟ ದುರ್ದೂವಿ. ಇದೇ ಮಾರ್ಗವಾಗಿ ಹೋಗುತ್ತಿದ್ದ ವಾಹನವೊಂದು ಓವರ್ ಟೇಕ್ ಮಾಡುವಾಗ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಅಪಘಾತ ಸಂಭವಿಸಿದೆ.

ಇನ್ನೂ ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ನವಲಗುಂದ ಸಿಪಿಐ ಚಂದ್ರಶೇಖರ ಮಠಪತಿ, ಹಾಗೂ ಪಟ್ಟಣದ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

27/02/2022 09:49 am

Cinque Terre

40.32 K

Cinque Terre

0

ಸಂಬಂಧಿತ ಸುದ್ದಿ