ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೊಳದಲ್ಲಿ ಯುವಕನ ಶವ ಪತ್ತೆ, ಕುಟುಂಬಸ್ಥರ ಕಣ್ಣೀರು

ಹುಬ್ಬಳ್ಳಿ: ತುಂಬಿದ ಕೊಳಕ್ಕೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

21 ವಯಸ್ಸಿನ ಶಶಾಂಕ್ ಮಾಗಡಿ ಮೃತ ಯುವಕನಾಗಿದ್ದು, ಈತ ಕಾಲೇಜು ಶಿಕ್ಷಣದ ಜೊತೆಗೆ ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದ.

ತಂದೆ ನಡೆಸುತ್ತಿದ್ದ ಕಂಪ್ಯೂಟರ್ ಅಂಗಡಿಯಿಂದ ಮನೆಗೆ ಹೋಗುವುದಾಗಿ ಹೇಳಿ ಮನೆಗೆ ಬರದೇ ಕಾಣೆಯಾಗಿದ್ದನು. ಶಶಾಂಕನಿಗಾಗಿ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದರು. ಇಂದು ಊರಿನ ಹೊರವಲಯದ ಕೊಳದಲ್ಲಿ ಶಶಾಂಕ್ ಶವ ತೇಲುತ್ತಿರುವುದನ್ನು ಗಮನಿಸಿದ ದಾರಿಹೋಕರು ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದು ಮೃತದೇಹ ಗುರುತಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸಾವಿಗೆ ನಿಖರ ಕಾರಣ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

03/03/2022 01:56 pm

Cinque Terre

46.12 K

Cinque Terre

3

ಸಂಬಂಧಿತ ಸುದ್ದಿ