ಧಾರವಾಡ: ವಿದ್ಯಾಭ್ಯಾಸಕ್ಕೆಂದು ಧಾರವಾಡಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಧಾರವಾಡದ ಕೆಸಿಡಿ ಸರ್ಕಲ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಶಿವಾನಂದ ವಾಲೀಕಾರ (26) ಎಂಬಾತನೇ ಸಾವನ್ನಪ್ಪಿದವನು.
ಬೈಕ್ ತೆಗೆದುಕೊಂಡು ಹೊರಟಿದ್ದ ಶಿವಾನಂದ ಕೆಸಿಡಿ ಸರ್ಕಲ್ ಬಳಿಯ ಫುಟ್‌ಪಾತ್‌ಗೆ ಬೈಕ್ ಸಮೇತ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ತಲೆಗೆ ಗಂಭೀರವಾದ ಪೆಟ್ಟು ಬಿದ್ದು ಶಿವಾನಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
07/03/2022 04:44 pm