ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಅಪಘಾತ - ಬೈಕ್ ಸವಾರನಿಗೆ ಗಂಭೀರ ಗಾಯ

ಪಟ್ಟಣದ ಹೊರವಲಯದ ಬಂಗಾರಪ್ಪ ಬಡಾವಣೆಯ ಹತ್ತಿರ ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗದ ರಸ್ತೆಯ ಮೇಲೆ ಗೂಡ್ಸ್ ವಾಹನ ಮತ್ತು ಬೈಕ್ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುತ್ತದೆ.

ಗದಗ್ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಮೇಲೆ ಬೈಕ್ ಸವಾರ ಒನ್ ವೆ ಮಾರ್ಗದ ರಸ್ತೆಯಲ್ಲಿ ಬಂದು ಎದುರಿಗೆ ಬರುತ್ತಿದ್ದ ಗೂಡ್ಸ್ ವಾಹನಕೆ ಡಿಕ್ಕಿ ಹೊಡೆಯುತ್ತಾನೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳಿಸಿ ಕೊಡಲಾಗಿದೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸ್ ಠಾಣೆಯ ಪಿಎಸ್ಐ ಜೂಲಕಟ್ಟಿ ಅವರು ಹಾಗೂ ಸಿಬ್ಬಂದಿ ಆಗಮಿಸಿ ತನಿಖೆಯನ್ನು ಮುಂದುವರಿಸಿರುತ್ತಾರೆ.

Edited By :
Kshetra Samachara

Kshetra Samachara

15/03/2022 02:59 pm

Cinque Terre

40.31 K

Cinque Terre

2

ಸಂಬಂಧಿತ ಸುದ್ದಿ