ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯ ಗಬ್ಬೂರ ಬಳಿ ಕಾರು ಪಲ್ಟಿ: ಇಬ್ಬರ ಸಾವು

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊರಹೊಲಯದ ಗಬ್ಬೂರ ಬೈಪಾಸ್ ಬಳಿ ನಡೆದಿದೆ.

ಘಟನೆಯಲ್ಲಿ ರಂಜಿತ್ ಮತ್ತು ರಾಕೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಹೋಗುವಾಗ ಈ ಘಟನೆ ನಡೆದಿದೆ. ಇನ್ನು ಕಾರಿನಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಾಯಗಳಾಗಿದ್ದು, ಕಿಮ್ಸ್ ಗೆ ದಾಖಲಿಸಲಾಗಿದೆ.

ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದ್ದು, ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

18/03/2022 08:57 am

Cinque Terre

36.25 K

Cinque Terre

6

ಸಂಬಂಧಿತ ಸುದ್ದಿ