ಹುಬ್ಬಳ್ಳಿ : ಹೋಳಿ ಹಬ್ಬದ ದಿನದಂತೆ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ನವಲಗುಂದ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದವರು ದೇವರ ದರ್ಶನ ಮುಗಿಸಿಕೊಂಡು ಮರಳಿ ಹುಬ್ಬಳ್ಳಿ ಬರುತ್ತಿದ್ದರು ಈ ವೇಳೆ ಚಾಲಕನ ನಿರ್ಲಕ್ಷ್ಯದಿಂದಲ್ಲೇ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
18/03/2022 10:23 am