ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ನಡೆದಿದೆ.
ನವಲಗುಂದದಿಂದ ಬರುತ್ತಿದ್ದ ಕಾರು ಇದಾಗಿದ್ದು, ಎದುರಿಗೆ ಬರುತ್ತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಯಗೊಂಡ ಚಾಲಕನನ್ನು ಕಿಮ್ಸ್ ಗೆ ದಾಖಲಿಸಲಾಗಿದೆ.
ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
21/03/2022 08:05 pm