ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ

ಧಾರವಾಡ: ಧಾರವಾಡ ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ರಾಜೇಶ್ ಕಾಟನ್ ಜಿನ್ನಿಂಗ್‌ಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿಕಾಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

ಹತ್ತಿ ಕಾಳುಗಳನ್ನು ಸಂಗ್ರಹಿಸಿ ಇಡಲಾಗಿದ್ದ ಚೀಲಗಳಿಗೆ ಈ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಿದೆ. ಸ್ಥಳಕ್ಕೆ ಕೂಡಲೇ ಭೇಟಿ ನೀಡಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕೆಲಸ ಮಾಡಿದರು.

Edited By : Shivu K
Kshetra Samachara

Kshetra Samachara

23/03/2022 08:27 am

Cinque Terre

60.44 K

Cinque Terre

2

ಸಂಬಂಧಿತ ಸುದ್ದಿ